" ಶ್ರೀ ಮಡಿವಾಳ ಮಾಚಿದೇವರ ಮೂರನೇ ವರ್ಷದ ಜಯಂತೋತ್ಸವ"

ಪರಮಪೂಜ್ಯ ಅವಧೂತ ಶ್ರೀ ವಿನಯ್ ಗುರೂಜಿ ಅವರ ದಿವ್ಯ ಸಾನಿಧ್ಯದಲ್ಲಿ ಮಡಿವಾಳರ ಜಾಗೃತಿ ವೇದಿಕೆಯ ಆಶ್ರಯದಲ್ಲಿ ಶ್ರೀ ಮಡಿವಾಳ ಮಾಚಿದೇವರ ಮೂರನೇ ವರ್ಷದ ಜಯಂತೋತ್ಸವ ಬೆಂಗಳೂರಿನ ಮಂಡಲಪಾಲ್ಯದ ಜ್ಞಾನಸೌಧದಲ್ಲಿ ನಡೆಯಿತು. ಅವಧೂತರು ಕಾರ್ಯಕ್ರಮ ಉದ್ಘಾಟಿಸಿ ಭಕ್ತ ಅನುಯಾಯಿಗಳಿಗೆ ಶುಭಾಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಕರಿಂಜೆ ಕ್ಷೇತ್ರದ ಮುತ್ತಾನಂದ ಸ್ವಾಮೀಜಿ ಮತ್ತು ಸಚಿವರಾದ ವಿ ಸೋಮಣ್ಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

"ತೀರ್ಥಹಳ್ಳಿಯಲ್ಲಿ ಹಿಂದೂ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ"

ಪರಮಪೂಜ್ಯ ಅವಧೂತ ಶ್ರೀ ವಿನಯ್ ಗುರೂಜಿ ಅವರ ದಿವ್ಯ ಸಾನಿಧ್ಯದಲ್ಲಿ ಕ್ಷತ್ರೀಯ ಮರಾಠ ಸಮಾಜದ ಆಶ್ರಯದಲ್ಲಿ ತೀರ್ಥಹಳ್ಳಿಯಲ್ಲಿ ಹಿಂದೂ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಮತ್ತು ಶೋಭಾಯಾತ್ರೆ ಕಾರ್ಯಕ್ರಮ ನೆರವೇರಿತು. ಅವಧೂತರು ಭಕ್ತ ಅನುಯಾಯಿಗಳಿಗೆ ಶುಭಾಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಮತ್ತು ಶ್ರೀ ರಘುವರೇಂದ್ರ ತೀರ್ಥ ಸ್ವಾಮೀಜಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

"ಶ್ರೀ ಪಂಚಮುಖಿ ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಪುನರ್‌ಪ್ರತಿಷ್ಠಾಪನೆ"

ಪರಮಪೂಜ್ಯ ಅವಧೂತ ಶ್ರೀ ವಿನಯ್ ಗುರೂಜಿ ಅವರ ದಿವ್ಯಸಾನಿಧ್ಯದಲ್ಲಿ ಉಡುಪಿಯ ಮಠದಬೆಟ್ಟು, ಕೋಟೇಶ್ವರದಲ್ಲಿ ಶ್ರೀ ಪಂಚಮುಖಿ ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಪುನರ್‌ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿತು. ಅವಧೂತರು ಸಭಾಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಭಕ್ತ ಅನುಯಾಯಿಗಳಿಗೆ ಶುಭಾಶೀರ್ವಚನ ನೀಡಿದರು.

"ಉಚಿತ ನೇತ್ರ ತಪಾಸಾಣಾ ಮತ್ತು ಚಿಕಿತ್ಸಾ ಶಿಬಿರ"

ಪರಮಪೂಜ್ಯ ಅವಧೂತ ಶ್ರೀ ವಿನಯ್ ಗುರೂಜಿ ಅವರ ಕೃಪಾಶೀರ್ವಾದದೊಂದಿಗೆ ಶ್ರೀ ಮಹಾತ್ಮ ಗಾಂಧಿ ಎಜುಕೇಷನಲ್ ಟ್ರಸ್ಟ್ ಚಿಕ್ಕಮಗಳೂರು, ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗ, ಗ್ರಾಮ ಪಂಚಾಯತ್ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಚೌಳಹಿರಿಯೂರು ಇವರ ನೇತ್ರತ್ವದಲ್ಲಿ ದಿನಾಂಕ 19/02/2023ರ ಭಾನುವಾರದಂದು ಚಿಕ್ಕಮಗಳೂರು ಜಿಲ್ಲೆ ಕಡೂರ್ ತಾಲೂಕ್ ಚೌಳಹಿರಿಯೂರು ಗ್ರಾಮದಲ್ಲಿ ಉಚಿತ ನೇತ್ರ ತಪಾಸಾಣಾ ಮತ್ತು ಚಿಕಿತ್ಸಾ ಶಿಬಿರವನ್ನು ಏರ್ಪಡಿಸಲಾಗಿತ್ತು. ಶಿಬಿರದಲ್ಲಿ 220 ಮಂದಿಗೆ ಉಚಿತವಾಗಿ ನೇತ್ರ ತಪಾಸಾಣೆ ನಡೆಸಲಾಯಿತು ಮತ್ತು ಕಣ್ಣಿನ ಪೊರೆ ಸಮಸ್ಯೆಯಿಂದ ಬಳಲುತ್ತಿದ್ದ 37 ಮಂದಿಗೆ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲು ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗ ಇಲ್ಲಿಗೆ ಕರೆದೊಯ್ಯಲಾಯಿತು.

"ಉತ್ತರಹಳ್ಳಿ ಆಶ್ರಮದಲ್ಲಿ ಶಿವರಾತ್ರಿ ಹಬ್ಬದ ಸಂಭ್ರಮ"

ಪರಮಪೂಜ್ಯ ಅವಧೂತ ಶ್ರೀ ವಿನಯ್ ಗುರೂಜಿ ಅವರ ಬೆಂಗಳೂರಿನ ಉತ್ತರಹಳ್ಳಿ ಅವಧೂತ ಆಶ್ರಮದಲ್ಲಿ ಶಿವರಾತ್ರಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಅವಧೂತರ ಭಕ್ತ ಅನುಯಾಯಿಗಳು ಭಜನೆ- ಜಾಗರಣೆ ಮಾಡುವ ಮೂಲಕ ಪರಮೇಶ್ವರನ ಅನುಗ್ರಹಕ್ಕೆ ಪಾತ್ರರಾದರು.

"ಬೃಹತ್ ಕುಣಿತ ಭಜನಾ ಸಂಭ್ರಮ"

ಪರಮಪೂಜ್ಯ ಅವಧೂತ ಶ್ರೀ ವಿನಯ್ ಗುರೂಜಿ ಅವರು ಛತ್ರಪತಿ ಶಿವಾಜಿ ಹಿಂದೂ ಸಾಮ್ರಾಜ್ಯ ದಿನ ನಿಮಿತ್ತವಾಗಿ ವಿಶ್ವ ಹಿಂದು ಪರಿಷತ್ ಭಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ ಕಡಬ ಪ್ರಖಂಡ ಹಾಗೂ ಶ್ರೀ ಧರ್ಮಚಾವಡಿ ಭಜನಾ ಕೂಟ ಕಲ್ಲುಗುಡ್ಡೆ-ನೂಜಿಬಾಳ್ತಿಲ ಇವುಗಳ ಆಶ್ರಯದಲ್ಲಿ ಕಡಬದ ಕಲ್ಲುಗುಡ್ಡೆಯಲ್ಲಿ ನಡೆದ ಬೃಹತ್ ಕುಣಿತ ಭಜನಾ ಸಂಭ್ರಮ 2023 ಕಾರ್ಯಕ್ರಮದಲ್ಲಿ ಭಾಗವಹಿಸಿ ಭಕ್ತ ಅನುಯಾಯಿಗಳಿಗೆ ಧರ್ಮ ಜಾಗೃತಿ ಆಶೀರ್ವಚನ ನೀಡಿದರು. ಈ ಸಂದರ್ಭ ಅವಧೂತ ಶ್ರೀ ವಿನಯ್ ಗುರೂಜಿ ಅವರು ಕುಣಿತ ಭಜನೆಯಲ್ಲಿ ಪಾಲ್ಗೊಂಡ ಮಕ್ಕಳಿಗೆ ಸಮವಸ್ತ್ರ ವಿತರಿಸಲು ಧನಸಹಾಯ ಮಾಡಿದರು.

"ಬಾವಿಕೆರೆ ಸರ್ಕಾರಿ ಶಾಲೆಯ ವಾರ್ಷಿಕೋತ್ಸವ"

ಪರಮಪೂಜ್ಯ ಅವಧೂತ ಶ್ರೀ ವಿನಯ್ ಗುರೂಜಿ ಅವರು ತರೀಕೆರೆ ತಾಲೂಕಿನ ಬಾವಿಕೆರೆ ಸರ್ಕಾರಿ ಶಾಲೆಯ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅವಧೂತರು ಈ ಸಂದರ್ಭ ನೆರೆದಿದ್ದ ಭಕ್ತ ಅನುಯಾಯಿಗಳಿಗೆ ಶುಭಾಶೀರ್ವಚನ ನೀಡಿದರು
 

"ಶ್ರೀ ಸತ್ಯನಾರಾಯಣ ಪೂಜೆ ಮತ್ತು ಪದಗ್ರಹಣ ಸಮಾರಂಭ"

ಪರಮಪೂಜ್ಯ ಅವಧೂತ ಶ್ರೀ ವಿನಯ್ ಗುರೂಜಿ ಅವರ ದಿವ್ಯ ಸಾನಿಧ್ಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಮತ್ತು ಪ್ರಗತಿಬಂಧು-ಸ್ವಸಹಾಯ ಸಂಘಗಳ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಚಿಕ್ಕಮಗಳೂರಿನ ಚಂಡೆಗುಡ್ಡೆ, ತಮ್ಮಡವಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಪದಗ್ರಹಣ ಸಮಾರಂಭ ನೆರವೇರಿತು. ಅವಧೂತರು ಭಕ್ತ ಅನುಯಾಯಿಗಳಿಗೆ ಶುಭಾಶೀರ್ವಚನ ನೀಡಿದರು.

"ಅನಾಥ ಮಕ್ಕಳ ಆಶ್ರಮದ ಗುದ್ದಲಿ ಪೂಜೆ"

ಪರಮಪೂಜ್ಯ ಅವಧೂತ ಶ್ರೀ ವಿನಯ್ ಗುರೂಜಿ ಅವರು ಚಿಕ್ಕಮಗಳೂರಿನ ಅಣಜೂರು, ಜನ್ನಾಪುರದಲ್ಲಿ ಮರುಜೀವನ ಟ್ರಸ್ಟ್ ವತಿಯಿಂದ ನಿರ್ಮಾಣವಾಗುತ್ತಿರುವ ಅನಾಥ ಮಕ್ಕಳ ಆಶ್ರಮದ ಗುದ್ದಲಿ ಪೂಜೆಯನ್ನು ನೆರವೇರಿಸಿದರು.

"ಶ್ರೀ ಗುರು ಪಂಚಲಿಂಗೇಶ್ವರ, ಶ್ರೀ ಚೌಡೇಶ್ವರಿ ಹಾಗೂ ಕೊಡಕಲ್ಲು ಗಂಗಮ್ಮ ದೇವಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ"

ಪರಮಪೂಜ್ಯ ಅವಧೂತ ಶ್ರೀ ವಿನಯ್ ಗುರೂಜಿ ಅವರ ದಿವ್ಯ ಸಾನಿಧ್ಯದಲ್ಲಿ ಚಿಕ್ಕಮಗಳೂರಿನ ಸಿದ್ದಾಪುರ ಗಂಗೇಗಿರಿ ಶ್ರೀ ಗುರು ಪಂಚಲಿಂಗೇಶ್ವರ, ಶ್ರೀ ಚೌಡೇಶ್ವರಿ ಹಾಗೂ ಕೊಡಕಲ್ಲು ಗಂಗಮ್ಮ ದೇವಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಿತು. ಈ ಸಂದರ್ಭ ಅವಧೂತರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದರು.

"ಶ್ರೀ ಕಾಳಿಕಾದೇವಿ ದೇವಸ್ಥಾನಕ್ಕೆ ಭೇಟಿ"

ಪರಮಪೂಜ್ಯ ಅವಧೂತ ಶ್ರೀ ವಿನಯ್ ಗುರೂಜಿ ಅವರು ಬೆಳಗಾವಿಯ ಶಿರಸಂಗಿ ಶ್ರೀ ಕಾಳಿಕಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.

"ಶ್ರೀ ಜಗದ್ಗುರು ದುರದುಂಡೀಶ್ವರ ಸಿದ್ಧಸಂಸ್ಥಾನ ಮಠ -ಮಹಾಶಿವರಾತ್ರಿ ಮಹೋತ್ಸವ ಮತ್ತು ಸಾಮೂಹಿಕ ಗುಗ್ಗಳೋತ್ಸವ"

ಪರಮಪೂಜ್ಯ ಅವಧೂತ ಶ್ರೀ ವಿನಯ್ ಗುರೂಜಿ ಅವರ ದಿವ್ಯಸಾನಿಧ್ಯದಲ್ಲಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶ್ರೀ ಜಗದ್ಗುರು ದುರದುಂಡೀಶ್ವರ ಸಿದ್ಧಸಂಸ್ಥಾನ ಮಠ, ನಿಡಸೋಸಿಯಲ್ಲಿ ಮಹಾಶಿವರಾತ್ರಿ ಮಹೋತ್ಸವ ಮತ್ತು ಸಾಮೂಹಿಕ ಗುಗ್ಗಳೋತ್ಸವ ಕಾರ್ಯಕ್ರಮಗಳು ನಡೆಯಿತು. ಅವಧೂತರು ಭಕ್ತ ಅನುಯಾಯಿಗಳಿಗೆ ಆಶೀರ್ವಚನ ನೀಡಿದರು.

"ಶ್ರೀ ಮಲ್ಲಿಕಾರ್ಜುನ ಸ್ವಾಮಿ - ವಿಶೇಷ ಪೂಜೆ"

ಪರಮಪೂಜ್ಯ ಅವಧೂತ ಶ್ರೀ ವಿನಯ್ ಗುರೂಜಿ ಅವರು ಬೆಳಗಾವಿ ಜಿಲ್ಲೆಯಲ್ಲಿರುವ ಬೇವಿನಕೊಪ್ಪ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ದೇವಸ್ಥಾನದಲ್ಲಿರುವ ಶಿವಲಿಂಗವು ಸುಮೇಧ ಮಹರ್ಷಿಗಳಿಂದ ಪ್ರತಿಷ್ಠಾಪಿಸಲ್ಪಟ್ಟಿದೆ ಎಂಬ ಪ್ರತೀತಿ ಇದೆ.

"ಶ್ರೀಶ್ರೀ ಡಾ ಪ್ರಕಾಶನಾಥ ಸ್ವಾಮೀಜಿ ಅವರ ಜನ್ಮದಿನೋತ್ಸವ ಕಾರ್ಯಕ್ರಮ"

ಪರಮಪೂಜ್ಯ ಅವಧೂತ ಶ್ರೀ ವಿನಯ್ ಗುರೂಜಿ ಅವರು ಬಿ.ಜಿ.ಎಸ್ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಶ್ರೀ ಡಾ ಪ್ರಕಾಶನಾಥ ಸ್ವಾಮೀಜಿ ಅವರ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀಶ್ರೀ ಡಾ ನಿರ್ಮಲಾನಂದನಾಥ ಸ್ವಾಮೀಜಿ, ಬೆಂಗಳೂರು ವಿಭಾಗದ ಮಾಜಿ ಪೋಲೀಸ್ ಕಮಿಷನರ್ ಭಾಸ್ಕರ್ ರಾವ್ ಐ.ಪಿ.ಎಸ್, ಖ್ಯಾತ ಚಲನಚಿತ್ರ ನಟ ದರ್ಶನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

"ಶ್ರೀಶ್ರೀ ಡಾ ಪ್ರಕಾಶನಾಥ ಸ್ವಾಮೀಜಿ ಅವರ ಜನ್ಮದಿನೋತ್ಸವ"​

ಪರಮಪೂಜ್ಯ ಅವಧೂತ ಶ್ರೀ ವಿನಯ್ ಗುರೂಜಿ ಅವರು ಬಿ.ಜಿ.ಎಸ್ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಶ್ರೀ ಡಾ ಪ್ರಕಾಶನಾಥ ಸ್ವಾಮೀಜಿ ಅವರ ಜನ್ಮದಿನೋತ್ಸವದ ಭಾಗವಾಗಿ ಏರ್ಪಡಿಸಿದ್ದ ವಿಶೇಷ ಪೂಜೆಯಲ್ಲಿ ಭಾಗಿವಹಿಸಿ ಶುಭ ಕೋರಿ, ಶ್ರೀ ಪ್ರಕಾಶನಾಥ ಸ್ವಾಮೀಜಿಗಳ ಸಮಾಜಮುಖೀ ಕಾರ್ಯಗಳು ಅಶಕ್ತರ ಬಾಳಿಗೆ ಆಶಾಕಿರಣವಾಗಿ ಸದಾಕಾಲ ಮುಂದುವರೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದರು.

"ಆಶಾಕಿರಣ"​

ಪರಮಪೂಜ್ಯ ಅವಧೂತ ಶ್ರೀ ವಿನಯ್ ಗುರೂಜಿ ಅವರು ಆಶ್ರಯ ಸಾಮಾಜಿಕ ಸೇವಾ ಸಂಸ್ಥೆಯ ಅಡಿಯಲ್ಲಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗಾಗಿ ಆಯೋಜಿಸಲಾಗಿದ್ದ ‘ಆಶಾಕಿರಣ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅವಧೂತರು ಈ ಸಂದರ್ಭ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಭೋಜನ ಬಡಿಸಿದರು. ಕಾರ್ಯಕ್ರಮದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.